ಬೆಳಗಾವಿ:- ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಪಡೆ ರಚನೆ ಮಾಡಲಾಗುತ್ತದೆ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಸಿ.ಟಿ ರವಿ ಹೇಳಿದ ಆ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ: ಗಳಗಳನೆ ಕಣ್ಣೀರು ಹಾಕಿದ ಹೆಬ್ಬಾಳಕರ್!
ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಬಾಂಗ್ಲಾ ವಲಸಿಗರು ಕರ್ನಾಟಕಕ್ಕೆ ಹಾಗೂ ದೇಶಕ್ಕೆ ಅಪಾಯಕರವಾಗಿದ್ದು, ಅವರನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದರು.
ಬಿಜೆಪಿ ಸದಸ್ಯ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾವಿರಾರು ಅಕ್ರಮ ವಲಸಿಗರು ಭಾರತಕ್ಕೆ ಆಗಮಿಸುಸುತ್ತಿದ್ದಾರೆ ಮತ್ತು ದೇಶದ ವಿವಿಧ ಭಾಗಗಳಿಗೆ ತೆರಳುತ್ತಾರೆ ಎಂದಿದ್ದಾರೆ.
ಅಕ್ರಮ ಬಾಂಗ್ಲಾ ವಲಸಿಗರನ್ನು ತಡೆಯುವ ನಿಟ್ಟಿನಲ್ಲಿ ನಮ್ಮ ರಕ್ಷಣಾ ಸಿಬ್ಬಂದಿ ಶ್ರಮ ವಹಿಸುತ್ತಿದ್ದಾರೆ. ಅದರ ಹೊರತಾಗಿಯೂ, ಅವರು ಭಾರತವನ್ನು ಪ್ರವೇಶಿಸುತ್ತಾರೆ. ಅವರನ್ನು ಗುರುತಿಸಲು ವಿಶೇಷ ಕಾರ್ಯಪಡೆ ರಚಿಸಿದ್ದೇವೆ. ಪ್ರತಿ ವರ್ಷ ಸಾವಿರಾರು ಜನರನ್ನು ಗಡೀಪಾರು ಮಾಡಲಾಗುತ್ತಿದೆ. ಇಲ್ಲಿಯವರೆಗೆ, ಅಕ್ರಮವಾಗಿ ನೆಲೆಸಿದ್ದ 159 ಬಾಂಗ್ಲಾದೇಶಿ ಪ್ರಜೆಗಳು ಮತ್ತು 24 ಪಾಕಿಸ್ತಾನೀಯರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬಾಂಗ್ಲಾದೇಶದ 115 ಜನರು ನಕಲಿ ದಾಖಲೆಗಳೊಂದಿಗೆ ಅಕ್ರಮವಾಗಿ ನೆಲೆಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಭಾರತದಲ್ಲಿ ಇಂತಹ ಎಷ್ಟು ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂದು ಬಿಜೆಪಿಯ ಅರುಣ್ ಪ್ರಶ್ನಿಸಿದ್ದಾರೆ. ಅಲ್ಲದೆ, ಚಿತ್ರದುರ್ಗದಲ್ಲಿ ಆರು ಮಂದಿಯ ಬಂಧನದಿಂದ ಕರ್ನಾಟಕದ ಹೋಂಸ್ಟೇ ಮತ್ತು ರೆಸಾರ್ಟ್ಗಳು ಅಕ್ರಮ ವಲಸಿಗರಿಗೆ ಸ್ವರ್ಗವಾಗಿ ಪರಿಣಮಿಸಿರುವುದು ತಿಳಿದುಬಂದಿದೆ ಎಂದಿದ್ದಾರೆ.
ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಪಡೆ ರಚಿಸಲಾಗಿದೆ ಎಂದರು.