ಬೆಂಗಳೂರು: ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಲೀಲಾವತಿಯವರು ನಿಧನರಾಗಿರುವ ಸುದ್ದಿ ಕೇಳಿ ಮುನಸ್ಸಿಗೆ ದುಖವಾಯಿತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡು ಬಡವಾದಂತಾಗಿದೆ.
ಕನ್ನಡ ಚಿತ್ರರಂಗದ ಮೇರು ನಟರಾದ ಡಾ. ರಾಜಕುಮಾರ್ ಸೇರಿದಂತೆ ಎಲ್ಲ ದಿಗ್ಗಜ ನಟರೊಂದಿಗೆ ವಿಭಿನ್ನ ಪಾತ್ರಗಳನ್ನು ಮಾಡಿ ಎಲ್ಲರ ಮನೆ ಮಾತಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ತಾಯಿಯ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.