ಬೆಂಗಳೂರು: ಇಂದು 75ನೇ ಗಣರಾಜ್ಯೋತ್ಸವ ಹಿನ್ನೆಲೆ ನಾಡಿನ ಜನತೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ.
ಮಾಜಿ ಸಿಎಂ ಎಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಾಶಯಗ ಕೋರಿದ್ದಾರೆ. ಈ ಸಂದರ್ಭದಲ್ಲಿ ರಾಷ್ಟ್ರದ ಅಭ್ಯುದಯಕ್ಕಾಗಿ ದುಡಿದ ಎಲ್ಲಾ ಮಹನೀಯರನ್ನು ಸ್ಮರಿಸೋಣ.
https://x.com/hd_kumaraswamy/status/1750697907907649843?t=S_fM5ZLLUUBvdSvuR8XfgQ&s=08
ಅನೇಕರ ತ್ಯಾಗ ಬಲಿದಾನಗಳಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವುದರ ಜತೆಗೆ, ಭಾರತವು ಮಹಾನ್ ಜಾಗತಿಕ ಶಕ್ತಿಯಾಗಿ ಅವಿರ್ಭವಿಸುವ ನಿಟ್ಟಿನಲ್ಲಿ ಒಟ್ಟಾಗಿ ದುಡಿಯೋಣ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.