ಬೆಂಗಳೂರು: ಮೇಕೆದಾಟು ಯೋಜನೆ ಆಗ್ರಹಿಸಿ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾ ರಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ಸುಳ್ಳಿನ ಸರಮಾಲೆಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ರಾಜಕೀಯ ಹುಂಬತನವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಟ್ವೀಟ್ ಮಾಡಿದ್ದಾರೆ.
