ಬೆಂಗಳೂರು:ಮೇಕೆದಾಟು ಯೋಜನೆ ಜಾರಿಯ ಪಾದಯಾತ್ರೆ ಇದು ಕಾಂಗ್ರೆಸ್ ಕಾರ್ಯಕ್ರಮವಲ್ಲ ಜನಪರ ಹೋರಾಟ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಇದ್ದಿದ್ದರೆ ‘ಮೇಕೆದಾಟು ಯೋಜನೆ’ ಈಗಾಗಲೇ ಆರಂಭ ಮಾಡಿರುತ್ತಿದೆವು. ಆದರೆ ಈ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಆದ್ದರಿಂದ ಈ ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಜನವರಿ 9ರಿಂದ 19ರ ವರೆಗೆ ಪಾದಯಾತ್ರೆ ನಡೆಸಲಿದೆ.
ಇದು ಪಕ್ಷದ ಕಾರ್ಯಕ್ರಮವಲ್ಲ, ರಾಜ್ಯದ ಹಿತದೃಷ್ಟಿಯಿಂದ ರೂಪಿಸಿರುವ ಜನಪರ ಹೋರಾಟ ಎಂದು ತಿಳಿಸಿದ್ದಾರೆ. ಇನ್ನೂ ಈ ಪಾದಯಾತ್ರೆ ಬೆಂಗಳೂರು ನಗರ, ಸುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
