ಬೆಂಗಳೂರು/ಹಾವೇರಿ:-ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶರಾಗಿದ್ದು, ರಾಜಕೀಯ ಮುಖಂಡರು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಮನೋಹರ್ ತಹಶೀಲ್ದಾರ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು, ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮನೋಹರ್ ತಹಶೀಲ್ದಾರ್ ಅವರು ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂದು ಬಳಗವನ್ನ ಅಗಲಿದ್ದಾರೆ. ಹಾನಗಲ್ನ ಎನ್ಸಿಜೆಸಿ ಮಹಾವಿದ್ಯಾಲಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಅವರ ಹುಟ್ಟೂರು ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿಕೊಂಡಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.