ಬೆಳಗಾವಿ : ಗಡಿನಾಡು ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಕೊಲೆಯಾಗಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು ಘಟನೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ ಆಟೋ ಚಾಲಕನೋರ್ವ ಮಾರಣಾಂತಿಕ ಹಲ್ಲೆ ನಡೆಸಿದ್ದು, ಗೋವಾದ ಮಾಜಿ ಶಾಸಕ ಲಾವೋ ಮಾಮಲೇದಾರ್ (69)ಮೃತಪಟ್ಟಿದ್ದಾರೆ.
ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೋ ಮಾಮಲೇದಾರ್ ಅವರು ಕಾರು ಆಟೋಗೆ ಡಿಕ್ಕಿಯಾಗಿದೆ. ಇದೇ ವಿಚಾರಕ್ಕೆ ಖಡೇಬಜಾರ್ನ ಲಾಡ್ಜ್ ಎದುರು ಆಟೋ ಚಾಲಕ ಮತ್ತು ಮಾಮಲೇದಾರ್ ಮಧ್ಯೆ ವಾಗ್ವಾದ ನಡೆದಿದೆ. ಈ ವೇಳೆ ಮಾಜಿ ಶಾಸಕನ ಮೇಲೆ ಆಟೋ ಚಾಲಕ ಹಲ್ಲೆ ನಡೆಸಿದ್ದು, ಲಾಡ್ಜ್ ಮೆಟ್ಟಿಲು ಹತ್ತುವಾಗಲೇ ಕುಸಿದು ಬಿದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆ ಕೊಂಡೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಎಸ್ಕೆ ವಿಶ್ವವಿದ್ಯಾನಿಲಯದ ಉಪಕುಲಪತಿ ಸಹಿ ನಕಲಿ ; ಡಿಗ್ರೂಪ್ ನೌಕರ ಅಮಾನತು
ಇನ್ನೂ ಹಲ್ಲೆ ನಡೆಸಿದ್ದ ಆಟೋ ಚಾಲಕ ಮುಜಾಹಿದ್ ಶಕೀಲ್ ಸನದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ವಿಜಯಪುರದಲ್ಲಿ ಅನೈತಿಕ ಸಂಬಂಧ ಹಿನ್ನೆಲೆ ವ್ಯಕ್ತಿಯೊಬ್ಬರ ಬರ್ಬರ ಹತ್ಯೆಯಾಗಿದೆ. ಸಿಂದಗಿ ತಾಲೂಕಿನ ಸುಂಕಟಾನ್ ಗ್ರಾಮದ ಕಿನಾಲ್ ಬಳಿ ಘಟನೆ ನಡೆದಿದ್ದು, ದಾದಾಪೀರ ನಾಯ್ಕೊಡಿಯ ಮೃತರಾಗಿದ್ದು, ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬುದ್ಧಪ್ಪ ಹೋಳಿ, ಸಚಿನ ಹೋಳಿ ಎಂಬಾತನ ವಿರುದ್ದ ದೂರು ನೀಡಿದ್ದಾರೆ.