ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Development Corporation scam) ಕೇಸ್ನಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ನಾಗೇಂದ್ರಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.
82 ನೇ ಸಿಟಿ ಸಿವಿಲ್ ಕೋರ್ಟ್ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಸಚಿವ ನಾಗೇಂದ್ರಗೆ ಜಾಮೀನು ಮಂಜುರಾಗಿದೆ. ಮೂರು ತಿಂಗಳ ಹಿಂದೆ ಮಾಜಿ ಸಚಿವ ನಾಗೇಂದ್ರ ಬಂಧಿಸಿದ್ದ ಇ.ಡಿ ಷರತ್ತು ಬದ್ದ ಜಾಮೀನು ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ನೀಡಲು ಆದೇಶ ನೀಡಿದೆ.
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಇಡಿ ಬೆಂಗಳೂರಿನ ಜನಪ್ರತಿನಿಗಳ ವಿಶೇಷ ನ್ಯಾಯಾಲಯಕ್ಕೆ 24 ಮಂದಿ ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ಇದೇ ಅಕ್ಟೋಬರ್ 5ರಂದು ಸಲ್ಲಿಸಿತ್ತು. ಪ್ರಕರಣದಲ್ಲಿ ನಾಗೇಂದ್ರ ಮಾಸ್ಟರ್ ಮೈಂಡ್ ಎಂದು ಇಡಿ ಉಲ್ಲೇಖಿಸಿದೆ. ಸತ್ಯನಾರಾಯಣ ವರ್ಮಾ, ಪದ್ಮನಾಭ, ನಾಗೇಶ್ರಾವ್, ನೆಕ್ಕಂಟಿ ನಾಗರಾಜ್, ವಿಜಯ್ಕುಮಾರ್ ಸೇರಿ 24 ಮಂದಿ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು. ಮೇ 2024 ರಲ್ಲಿ ನಿಗಮದ ಉದ್ಯೋಗಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ನಂತರ ಈ ಬಹುಕೋಟಿ ಹಗರಣ ಬೆಳಕಿಗೆ ಬಂದಿತ್ತು