ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಪಿಎನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
CM Siddaramaiah: ದಿಢೀರ್ ಅಂತಾ ಮೈಸೂರಿಗೆ ತೆರಳಿದ ಸಿಎಂ : ಕಾರಣವೇನು ಗೊತ್ತಾ?
ನಾಗೇಂದ್ರ ಅವರ ಪಿಎ ಹರೀಶ್ ಎಂಬಾತನನ್ನು ಅಧಿಕಾರಿಗಳು ಬಂಧಿಸಿ ಶಾಂತಿನಗರದ ಇಡಿ ಕಚೇರಿಗೆ ಕರೆತಂದಿದ್ದಾರೆ.ಅಕ್ರಮವಾಗಿ ಹಣ ಸಾಗಾಟದಲ್ಲಿ ಹರೀಶ್ ಪಾತ್ರ ವಹಿಸಿರುವುದು ಇಡಿ ತನಿಖೆಯಿಂದ ದೃಢಪಟ್ಟಿದೆ. ಸಚಿವರ ಪರವಾಗಿ ಪಿಎ ಡೀಲ್ ನಡೆಸಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ಅಧಿಕಾರಿಗಳು ಬಂಧಿಸಿದ್ದಾರೆ.
ಮಾಜಿ ಸಚಿವ ನಾಗೇಂದ್ರ ಅವರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗ್ಗೆ ಇಡಿ ದಾಳಿ ನಡೆಸಿತ್ತು. ನಾಗೇಂದ್ರ ಅವರಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿದರು.