ಬೆಂಗಳೂರು:– ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಹಾಗೂ ಮಾಜಿ ಸಚಿವ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಇನ್ನೂ ಇಂದು ಬಿಜೆಪಿ ಶಾಸಕ ಪಕ್ಷದ ಸಭೆಯನ್ನು ಬೆಂಗಳೂರಿನ ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದೀಗ ಕೆಲ ಶಾಸಕರುಗಳು ಸಭೆಗೆ ಗೈರಾಗಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ. ಸೋಮಶೇಖರ್ ಸಭೆಗೆ ಗೈರಾಗಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಗೈರಾಗಿದ್ದಾರೆ. ಸಭೆಯ ಬಗ್ಗೆ ತಿಳಿದಿದ್ದರೂ ಸೋಮಶೇಖರ್ ದೆಹಲಿಗೆ ತೆರಳಲಿದ್ದಾರೆ.

ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಆರಂಭವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ವಿಧಾನಸಭೆ, ಪರಿಷತ್​ ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಚರ್ಚೆ ಶುರುವಾಗಿದ್ದು, ವೀಕ್ಷಕರರಾಗಿ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದಾರೆ.

Share.