ಚಿತ್ರದುರ್ಗ : ಹೊಸದುರ್ಗದ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ವಯೋವೃದ್ದ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಗೂಳಿಹಟ್ಟಿಯ ಮನೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 86 ವರ್ಷವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಶಾಸಕ ಬಿಜಿ ಗೋವಿಂದಪ್ಪ, ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಈ ಹಿಂದೆ ಪುಟ್ಟಮ್ಮ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದರು. ಬಳಿಕ ಮಗನ ಒತ್ತಾಯಕ್ಕೆ ಮಣಿದು ಹಿಂದೂ ಧರ್ಮಕ್ಕೆ ಮರಳಿದ್ದರು.