ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ. ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ.
Heart Attack Symptoms: ಎಚ್ಚರ! ಈ ಲಕ್ಷಣಗಳು ಹಾರ್ಟ್ ಅಟ್ಯಾಕ್’ನ ಸೂಚನೆ ಇರಬಹುದು..!
ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.