ಬೆಂಗಳೂರು:-ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ವಂಚನೆ ಮಾಡಿದ ಆರೋಪದ ಹಿನ್ನೆಲೆ ಐಶ್ವರ್ಯ ಗೌಡ ವಿರುದ್ಧ ಡಿ. ಕೆ ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಇಂದು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
Hubballi: ಹೆಬ್ಬಾಳ್ಕರ್-ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ; ಹೊರಟ್ಟಿ!
ಘಟನೆ ಸಂಬಂಧ ಡಿಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದು, ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ.
ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ.
ತಮ್ಮ ತಂಗಿ ಅಂತ ಸುಳ್ಳು ಹೇಳಿಕೊಂಡು ಚಿನ್ನದಂಗಡಿ ಮಾಲಕಿ ವನಿತಾ ಐತಾಳ್ ಎಂಬುವರಿಗೆ ವಂಚಿಸಿದ ಆರೋಪಿ ಐಶ್ವರ್ಯಾ ಗೌಡ ವಿರುದ್ಧ ಡಿಕೆ ಸುರೇಶ್ ಗರಂ ಆಗಿದ್ದಾರೆ. ವಂಚಕಿ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ಪತ್ರ ಬರೆದಿದ್ದಾರೆ. ತನ್ನ ಹೆಸ್ರು ಬಳಸಿ ವಂಚನೆ ಮಾಡಿರೋ ಐಶ್ವರ್ಯಾ ಗೌಡ ವಿರುದ್ದ ಸೂಕ್ತ ಕ್ರಮಕ್ಕೆ ಡಿಕೆ ಸುರೇಶ್ ಮನವಿ ಮಾಡಿದ್ದಾರೆ.