ನವದೆಹಲಿ:- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ.
ಉಸಿರಾಟದ ತೊಂದರೆ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು!
ಎರಡು ಬಾರಿ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದೇಶದ ಆರ್ಥಿಕ ಸುಧಾರಣೆಗಳ ದಿಟ್ಟ ಹೆಜ್ಜೆ ಕೈಗೊಂಡು, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ ಎನಿಸಿದ್ದ ಸಿಂಗ್, 1991ರ ಅಕ್ಟೋಬರ್ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ್ದರು. ಅವರು 1991ರಿಂದ 1996ರವರೆಗೆ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಬಳಿಕ 2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿದ್ದರು.