ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದುಬಂದಿದೆ. 92 ರ ವಯೋಮಾನದ ದೇವೇಗೌಡರಿಗೆ ಇಳಿವಯಸ್ಸಿನ ತೀವ್ರ ಆಘಾತ ಉಂಟಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಮನೆ ಬಿಟ್ಟು ಹೊರಬಾರದೆ, ಸರಿಯಾಗಿ ಊಟ, ನಿದ್ದೆ ದೇವೆಗೌಡರು ಮಾಡುತ್ತಿಲ್ಲ,
ಹೀಗಾಗಿ ದೇವೆಗೌಡರ ಆರೋಗ್ಯದ ಬಗ್ಗೆ ಕುಟುಂಬಸ್ಥರಿಗೆ ಚಿಂತೆಯಾಗಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು, ಹಿರಿಮಗ ಹಾಗೂ ಮೊಮ್ಮಗನ ಹಗರಣಗಳಿಂದಾಗಿ ತೀವ್ರವಾಗಿ ನೊಂದಿದ್ದಾರೆ.
Car airbags: ನಿಮ್ಮ ಕಾರಿನಲ್ಲಿರುವ ಏರ್ʼಬ್ಯಾಗ್ ಅಸಲಿಯೋ, ನಕಲಿಯೋ ತಿಳಿಯುವುದೇಗೆ ಗೊತ್ತಾ..? ಈ ಸ್ಟೋರಿ ನೋಡಿ
ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಪತ್ನಿ ಚೆನ್ನಮ್ಮ ಆರೋಗ್ಯದ ಬಗ್ಗೆಯೂ ಕುಟುಂಬದ ಸದಸ್ಯರು ತೀವ್ರ ನಿಗಾ ವಹಿಸುತ್ತಿದ್ದಾರೆ. ಹೆಣ್ಣು ಮಕ್ಕಳು ಸಂಪೂರ್ಣ ಮೇಲ್ವಿಚಾರಣೆ ಹೊತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆ ಎರಡೂ ಟೈಮ್ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಈ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಹಿನ್ನೆಲೆ ಹೆಚ್ಚು ಟಿ ವಿ ನೋಡದಂತೆ ದೇವೇಗೌಡರಿಗೆ ವೈದ್ಯರು ಕೂಡ ಸಲಹೆ ನೀಡಿದ್ದಾರೆ.