ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ (Corona Virus) ಆತಂಕ ಹೆಚ್ಚಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿರೋದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಕೊರೊನಾ ರೂಪಾಂತರ ತಳಿ JN.1 ಪತ್ತೆಯಾಗಿರುವ ಹಿನ್ನೆಲೆ ಸರ್ಕಾರ ರಾಜ್ಯದಲ್ಲಿ ಹದ್ದಿನ ಕಣ್ಣಿಟ್ಟಿದೆ.
Winter Health: ಚಳಿಗಾಲದಲ್ಲಿ ಗಂಟಲು ನೋವು, ಕೆಮ್ಮು ಸಮಸ್ಯೆಯೇ?: ಈ ವಸ್ತುಗಳನ್ನ ತಯಾರಿಸಿ ಟೀ ಕುಡಿದು ನೋಡಿ!
ಸರ್ಕಾರದ ಮಾರ್ಗಸೂಚಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಜಿಲ್ಲಾದ್ಯಂತ ಜೆಎನ್.1 ಎದುರಿಸಲು ಸನ್ನದ್ಧವಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ (Government And Private Hospitals) ಮಾಹಿತಿ ಪಡೆಯಲಾಗಿದೆ. ಜೊತೆಗೆ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲ್ಯಾಂಟ್, ವೆಂಟಿಲೇಟರ್ಗಳು ಹಾಗೂ ಹಾಸಿಗಳ ವ್ಯವಸ್ತೆ ನೋಡಿಕೊಳ್ಳುವಂತೆ ಸೂಚನೆ ನೀಡಿದೆ.