ನವದೆಹಲಿ: ಇಂಡಿಯಾ ಒಕ್ಕೂಟದ (INDIA Bloc) ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jai Ram Ramesh) ಹೇಳಿದ್ದಾರೆ. ಈ ಹಿಂದೆ ಡಿಸೆಂಬರ್ 17 ರಂದು ಸಭೆ ನಿಗದಿಯಾಗಿತ್ತು. ಆದರೆ ಇದೀಗ ಮತ್ತೆ ಈ ಸಭೆಯನ್ನು ಮುಂದೂಡಿದ್ದು, ಇದಕ್ಕೆ ಕಾರಣ ತಿಳಿದುಬಂದಿಲ್ಲ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಮೈತ್ರಿಕೂಟದ ಉನ್ನತ ನಾಯಕರು ನಿರ್ಧರಿಸಿದ ಹಿನ್ನೆಲೆಯಲ್ಲಿ ಡಿ.6ರಂದು ನಿಗದಿಯಾಗಿದ್ದ ಸಭೆಯನ್ನು ಡಿ. 17 ಕ್ಕೆ ಮುಂದೂಡಲಾಗಿತ್ತು.
ಬಾಡಿಗೆ ಬೈಕ್’ನಲ್ಲಿ 330km ಪ್ರಯಾಣಿಸಿ ವಿಧಾನಸಭೆಗೆ ತೆರಳಿದ ಜನಪ್ರತಿನಿಧಿ!
ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ ಮತ್ತು ರಾಜಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಡಿಸೆಂಬರ್ 6 ರಂದು ಕಾಂಗ್ರೆಸ್ ಸಭೆಯನ್ನು (Comgress Meeting) ಕರೆದಿತ್ತು . ಆದರೆ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ಪ್ರತಿಪಕ್ಷಗಳ ಸಭೆಯನ್ನು ಘೋಷಿಸಲಾಯಿತು.