ಬೆಂಗಳೂರು:- ಕಾಂಗ್ರೆಸ್ ಮುಖಂಡ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದೆ. ಐಶ್ವರ್ಯ ಗೌಡ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ಮಾಲೀಕರು ದೂರು ನೀಡಿದ್ದರು ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ದಂಪತಿಗೆ ಬಿಗ್ ರಿಲೀಫ್ ಸಿಕ್ಕಿದೆ
IPL 2025: RCB ಆಟಗಾರ ದೇವದತ್ ಪಡಿಕ್ಕಲ್ಗೆ ಶಾಕಿಂಗ್ ನ್ಯೂಸ್: ಏನದು?
ಎಸ್, ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಬಿಡುಗಡೆಗೆ ಹೈಕೋರ್ಟ್ ಆದೇಶ ಹೊರಡಿಸಿದ್ದಾರೆ.
ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜ್ಯುವೆಲ್ಲರ್ಸ್ ಮಾಲೀಕರಿಗೆ 14 ಕೆಜಿ ಚಿನ್ನ ವಂಚಿಸಿದ ಪ್ರಕರಣದಲ್ಲಿ ಆರೋಪಿ ಐಶ್ವರ್ಯಾ ಗೌಡ ಹಾಗೂ ಅವರ ಪತಿ ಹರೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಂಧನ ಪ್ರಶ್ನಿಸಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಆರೋಪಿ ಐಶ್ವರ್ಯಾ ಗೌಡ, ಪತಿ ಹರೀಶ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇಬ್ಬರನ್ನು ಬಿಡುಗಡೆ ಮಾಡಲು ಆದೇಶ ನೀಡಿದೆ. ಪೊಲೀಸರು ಬಂಧನಕ್ಕೆ ಕಾರಣ ತಿಳಿಸದೆ ಬಂಧಿಸಿರುವುದರಿಂದ ಈಗ ಬಿಡುಗಡೆ ಮಾಡಲು ಸೂಚನೆ ನೀಡಿದೆ.
ಆರೋಪಿ ಪರ ವಕೀಲ ಸಂದೇಶ್ ಚೌಟ ಅವರು ಹಾಗೆ ಮಾಡಲಾಗದು. ತಕ್ಷಣವನ್ನು ಅವರನ್ನು ಬಿಡುಗಡೆ ಮಾಡಬೇಕು ಎಂದು ವಾದಿಸಿದರು. ಆದರೆ ನ್ಯಾಯಾಲಯ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ ಅವರನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ್ದು, ಅರ್ಜಿದಾರರು ತನಿಖೆಗೆ ಸಹಕರಿಸಬೇಕು. ಅರ್ಜಿದಾರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾಧಿಕಾರಿ ಶೋಧ ನಡೆಸಬಹುದಾಗಿದೆ. ತನಿಖೆ ಮುಂದುವರಿಯಲಿದೆ ಎಂದಿದೆ.