ಬೆಂಗಳೂರು : ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಗ್ರಾಮದಲ್ಲಿ ಬೃಹತ್ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನೂ ಶಿಬಿರದಲ್ಲಿ ಡಾಕ್ಟರ್ ಸತೀಶ್ ಅವರು, 60 ಜನರಿಗೆ ಇಂದು ಉಚಿತ ಕನ್ನಡಕಗಳನ್ನು ವಿತರಣೆ ಮಾಡಿದ್ದರು. ಹಾಗೂ ಸಾರ್ವಜನಿಕರು ಈ ಆರೋಗ್ಯ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದರು. ಇನ್ನೂ ಕಾರ್ಯಕ್ರಮದಲ್ಲಿ ನಿಸರ್ಗ ಅಧ್ಯಕ್ಷರಾದ ದೇವರಾಜ್ ನಾಯಕ್, ಸತೀಶ್, ಅರುಣ್ ಕುಮಾರ್, ಲಯನ್ ಮೋಹನ್ ರೆಡ್ಡಿ , ಸೇರಿದಂತೆ ಗಣ್ಯಾತಿಗಣ್ಯರು ಭಾಗಿಯಾಗಿದ್ದರು.
