ಮೈಸೂರು: ”ಇಂದು ಕ್ಯಾನ್ಸರ್ ರೋಗ ಹೆಚ್ಚಾಗುತ್ತಿದ್ದು, ಎಲ್ಲ ವಯೋಮಾನದವರನ್ನೂ ಬಾಧಿಸುತ್ತಿದೆ. ಹೀಗಾಗಿ, ಎಲ್ಲ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಅವರು, ” ರಾಜಧಾನಿ ಬೆಂಗಳೂರು ನಂತರ ಮೈಸೂರು ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ.
CET Exam 2024-25: ಏಪ್ರಿಲ್ 20, 21 ರಂದು ಸಿಇಟಿ ಪರೀಕ್ಷೆ ಜನವರಿ 10 ರಿಂದ ಅರ್ಜಿ ಸಲ್ಲಿಕೆ ಆರಂಭ
ಬೆಂಗಳೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಇದೆ. ಮೈಸೂರು ಭಾಗದಿಂದಲೂ ಅಲ್ಲಿಗೆ ಸಾಕಷ್ಟು ರೋಗಿಗಳು ಹೋಗುತ್ತಾರೆ. ಅಲ್ಲಿನ ಒತ್ತಡ ಕಡಿಮೆ ಮಾಡಬೇಕಾದರೆ ಜಿಲ್ಲಾಕೇಂದ್ರಗಳಲ್ಲಿಕ್ಯಾನ್ಸರ್ ಆಸ್ಪತ್ರೆ ಪ್ರಾರಂಭ ಮಾಡಬೇಕು. ದುಡಿಯುವ ವರ್ಗಗಳಿಗೆ ಭಾರವಾಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರಕಾರದ ಕಾಳಜಿ,” ಎಂದು ತಿಳಿಸಿದರು.