ನವದೆಹಲಿ: ಗರ್ಭಕೋಶ ಕ್ಯಾನ್ಸರ್ ತಡೆಗಾಗಿ ಕೇಂದ್ರ ಸರ್ಕಾರವು ಉಚಿವಾಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. 9-14 ವರ್ಷದ ಬಾಲಕಿಯರಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು. ಇನ್ನೂ ಹಣಕಾಸು ಸಚಿವರು, ಮುಂಬರುವ ರಾಷ್ಟ್ರೀಯ ಚುನಾವಣೆಯಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ.
ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.