ಬೆಂಗಳೂರು: ದೇಶದ ಜನತೆಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ರಸ್ತೆ ಅಪಘಾತಗಳಿಗೆ ಅತಿ ಹೆಚ್ಚು ವೇಗ, ಅಜಾಗರೂಕ ಚಾಲನೆ, ಕುಡಿದು ವಾಹನ ಚಾಲನೆ ಮತ್ತು ಸಂಚಾರ ನಿಯಮಗಳನ್ನು ಪಾಲಿಸದೇ ಇರುವುದು ಅತ್ಯಂತ ದೊಡ್ಡ ಕಾರಣಗಳಾಗಿವೆ.
ಇಂತಹ ರಸ್ತೆ ಅಪಘಾತಗಳ ಬಗ್ಗೆ ಚಾಲಕರಲ್ಲಿ ಜಾಗೃತಿ ಮೂಡಿಸಬೇಕು. ಇದರಿಂದ ಸಾಧ್ಯವಾದಷ್ಟು ಜೀವಗಳನ್ನು ಉಳಿಸಬಹುದು. ಚಾಲಕರಿಗೆ ಅನೇಕ ರೀತಿಯ ಶಿಕ್ಷಣ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಸಚಿವಾಲಯ ತಿಳಿಸಿದೆ.
Heart Health: ನಿಮಗೆ ಹೃದಯದ ಸಮಸ್ಯೆ ಇದೆಯಾ..? ಹಾಗಾದ್ರೆ ವಾರಕ್ಕೆ ಎರಡು ಬಾರಿ ಮೀನು ತಿನ್ನಿ ಸಾಕು
ಅದಲ್ಲದೆ ರಸ್ತೆ ಅಪಘಾತಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ದೊಡ್ಡ ಘೋಷಣೆ ಮಾಡಿದೆ. ಇನ್ಮುಂದೆ ಅಪಘಾತಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ನಗದು ರಹಿತ ಚಿಕಿತ್ಸಾ ಯೋಜನೆಯನ್ನು ಘೋಷಿಸಿದ್ದಾರೆ. ಅಪಘಾತ ಸಂಭವಿಸಿದ 24 ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ 1.5 ಲಕ್ಷ ರೂ.ವರೆಗಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಅಂತ ತಿಳಿಸಿದ್ದಾರೆ.
ಈ ಯೋಜನೆಯು ಯಾವುದೇ ವರ್ಗದ ರಸ್ತೆ ಅಪಘಾತಗಳಿಗೆ ಅನ್ವಯಿಸಲಿದೆ. ಇನ್ನು ಹಿಟ್ ಅಂಡ್ ರನ್ ಪ್ರಕರಣಗಳಲ್ಲೂ ಸಂತ್ರಸ್ತ ಕುಟುಂಬಕ್ಕೆ 2 ಲಕ್ಷ ರೂ.ವರೆಗೆ ಗರಿಷ್ಟ ಪರಿಹಾರ ನೀಡಲಾಗುವುದು ಅಂತ ಯೋಜನೆಯಲ್ಲಿ ಹೇಳಲಾಗಿದೆ.
ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ , ಪೊಲೀಸ್, ಆಸ್ಪತ್ರೆಗಳು ಮತ್ತು ರಾಜ್ಯ ಆರೋಗ್ಯ ಏಜೆನ್ಸಿಗಳ ಮೇಲುಸ್ತುವಾರಿಯಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದೆ. ಇದಕ್ಕಾಗಿ ಪ್ರತ್ಯೇಕ ವೆಬ್ ಸೈಟ್ ಸಹ ರೂಪುಗೊಳ್ಳಲಿದೆ. ಇದರಲ್ಲಿ ಅಪಘಾತದ ವರದಿ ದಾಖಲಾದ ಬಳಿಕ ಗಾಯಾಳುಗಳ ಚಿಕಿತ್ಸೆ ವೆಚ್ಚ ಆಸ್ಪತ್ರೆಗಳಿಗೆ ಪಾವತಿಯಾಗಲಿದೆ.