ಬೆಂಗಳೂರು:- ಡಿಸಿಎಂ ಡಿಕೆ ಶಿವಕುಮಾರ್ ಅವರು ಇತ್ತೀಚೆಗೆ ಗ್ಯಾರಂಟಿ ಸ್ಕೀಂಗಳಲ್ಲಿ ಪ್ರಮುಖವಾಗಿರುವ ಶಕ್ತಿ ಯೋಜನೆಯ ಪರಿಷ್ಕರಣೆ ಬಗ್ಗೆ ಮಾತನಾಡಿ ಭಾರೀ ಸುದ್ದಿಯಾಗಿದ್ದರು. ಈಗ ಮತ್ತೊಂದು ಹೇಳಿಕೆ ನೀಡುವ ಮತ್ತೆ ಸುದ್ದಿಯಾಗಿದ್ದಾರೆ.
Darshan: ಸರ್ಜರಿಗೆ ದರ್ಶನ್ ಹಿಂದೇಟು: ಕಾನೂನು ಸಮರಕ್ಕೆ ಸಜ್ಜಾದ SPP ಪ್ರಸನ್ನ ಕುಮಾರ್!
ಗಂಡಸರಿಗೆ ನೆಮ್ಮದಿ ಆಗುವಂತಹ ಸುದ್ದಿಯನ್ನು ಡಿಕೆ ಶಿವಕುಮಾರ್ ಕೊಟ್ಟಿದ್ದಾರೆ.
ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಒಂದು ಪ್ರಶ್ನೆ ಕೇಳಿದ್ದಾನೆ. ಫ್ರೀ ಬಸ್ ಯೋಜನೆಯಲ್ಲಿ ನಮ್ಮ ತಾಯಿ ಸಂಚಾರ ಮಾಡುತ್ತಾರೆ. ನನ್ನ ತಾಯಿ ನನ್ನ ಬಿಟ್ಟು ನನ್ನ ಅಕ್ಕ-ತಂಗಿಯನ್ನು ಮಾತ್ರ ಕರೆದುಕೊಂಡು ಹೋಗುತ್ತಾರೆ. ಬಸ್ಸಲ್ಲಿ ಗಂಡು ಮಕ್ಕಳಿಗೂ ಫ್ರೀ ಪ್ರಯಾಣ ಸಿಗುತ್ತಾ? ಎಂದು ಪ್ರಶ್ನಿಸಿದ್ದಾರೆ.
ಮಕ್ಕಳ ಜೊತೆ ಸಂವಾದದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು ವಯಸ್ಸಿನ ಮಿತಿ ನಿರ್ಧರಿಸಿ ಫ್ರೀ ಪ್ರಯಾಣಕ್ಕೆ ಚಿಂತನೆ ನಡೆಸಲಾಗುವುದು. ಒಂದು ಏಜ್ವರೆಗೆ ಫ್ರೀ ನೀಡಲು ಯೋಚಿಸ್ತೀವಿ ಎಂದಿದ್ದಾರೆ.
ಡಿಕೆ ಶಿವಕುಮಾರ್ ಅವರ ಈ ಮಾತಿನಿಂದ ಶಕ್ತಿ ಯೋಜನೆ ವಿಸ್ತರಣೆ ಆಗುತ್ತಾ ಅನ್ನೋ ಚರ್ಚೆ ಶುರುವಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಲಾಗಿದೆ. ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಇಲ್ಲ. ಪುರುಷರಿಗೆ ಉಚಿತ ಪ್ರಯಾಣ ನೀಡುವ ಯೋಜನೆ ಸದ್ಯಕ್ಕಿಲ್ಲ. ನಮ್ಮ ಬಳಿ ಅಂತಹ ಯಾವುದೇ ಪ್ರಸ್ತಾವನೆಯೂ ಇಲ್ಲ. ಡಿಕೆ ಶಿವಕುಮಾರ್ ಭೇಟಿ ಮಾಡಿದಾಗ ಇದರ ಬಗ್ಗೆ ವಿಚಾರಿಸುತ್ತೇನೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.