ಬೆಂಗಳೂರು:– ನಾಳೆಯಿಂದ ಡಿ. 9ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಉತ್ತರ ಒಳನಾಡಲ್ಲಿ ಸಕ್ರಿಯವಾಗಿದ್ದ ಮಳೆಯು ಮುಂದಿನ ವಾರ ದುರ್ಬಲಗೊಳ್ಳಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ ವಿಜಯಪುರದ ಅಲ್ಲಲ್ಲಿ ತಕ್ಕ ಮಟ್ಟಿಗೆ ಮಳೆ ಸಾಧ್ಯತೆ ಇದೆ. ಉಳಿದಂತೆ ಗದಗ, ಕೊಪ್ಪಳದಲ್ಲಿ ಒಣಹವೆ ಇರಲಿದೆ.
ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆ ಅಬ್ಬರ ಇರಲಿದೆ.
ರಾಜ್ಯದ ವಿವಿಧೆಡೆ ಮಳೆಯಾಗಿರುವ ವರದಿ ಆಗಿದ್ದು, ಬೆಳಗಾವಿಯ ಹುಕ್ಕೇರಿಯಲ್ಲಿ 7 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಉಳಿದಂತೆ ಚಿಕ್ಕೋಡಿಯಲ್ಲಿ 5 ಸೆಂ.ಮೀ, ಸೇಡಬಾಳ, ಬೈಲಹೊಂಗಲ, ಹಿಡಕಲ್ ಅಣೆಕಟ್ಟಲ್ಲಿ 4 ಸೆಂ.ಮೀ, ರಾಯ್ಭಾಗ, ಶೃಂಗೇರಿಯಲ್ಲಿ 3, ಗೋಕಾಕ್, ಸಂಕೇಶ್ವರ್ನಲ್ಲಿ 2 ಸೆಂ.ಮೀ, ರಾಯಲ್ಪಡು, ಚಿಕ್ಕಬಳ್ಳಾಪುರ, ಜಯಪುರ, ಕಮ್ಮರ್ಡಿಯಲ್ಲಿ 1 ಸೆಂ,ಮೀ ಮಳೆಯಾಗಿದೆ. ಚಿಕ್ಕನಹಳ್ಳಿಯಲ್ಲಿ ಕನಿಷ್ಠ ಉಷ್ಣಾಂಶ 17.0 ಡಿ.ಸೆ ದಾಖಲಾಗಿದೆ.