ಹುಬ್ಬಳ್ಳಿ:- ಹುಬ್ಬಳ್ಳಿಯ ಉಣಕಲ್ನಲ್ಲಿ ಪ್ರೇಯಸಿಯ ಕಾಟದಿಂದ ಬೇಸತ್ತು ಯುವಕನೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಜರುಗಿದೆ.
ಕ್ಷುಲ್ಲಕ ವಿಚಾರಕ್ಕೆ ಕಿರಿಕ್: ಓರ್ವನ ಮೇಲೆ ಮೂವರು ಅಟ್ಯಾಕ್! ಸಿಡಿದೆದ್ದ ಬೆಂಬಲಿಗರಿಂದ ಹಲ್ಲೆ!
ಸಂದೇಶ್ ಉಣಕಲ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ ಸಂದೇಶ, ಉಣಕಲ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ.
ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ, ಇದೀಗ ಸಂದೇಶ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.