ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಿ ನೆಪದಲ್ಲಿ ಸಾಲಗಾರರನ್ನು ಇನ್ನಿಲ್ಲದಂತೆ ಕಾಡಿ ಕಂಗೆಡಿಸಿವೆ. ಸಾಕಷ್ಟು ಜನರ ಪ್ರಾಣಕ್ಕೆ ಕಂಟಕವಾಗಿವೆ. ಜೀವ ಹಿಂಡುವ ಇಂತಹ ಪೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಇದೀಗ ಫೈನಾನ್ಸ್ಗಳ ಕಡಿವಾಣಕ್ಕೆ ತರಲಿರುವ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಬಳಿ ಅಂಕಿತ ಪಡೆಯಲು ನಿರ್ಧರಿಸಿದೆ.
ಹೌದು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ ತರುವ ಮಸೂದೆಗೆ ಒಪ್ಪಿಗೆ ನೀಡಲಾಗಿದೆ.
Swollen Feet: ಪದೇ ಪದೇ ಪಾದಗಳು ಊದಿಕೊಳ್ಳುತ್ತವೆಯೇ..? ಇಲ್ಲಿದೆ ನೋಡಿ ಸಿಂಪಲ್ ಮನೆಮದ್ದುಗಳು
ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರ ಬಳಿ ಅಂಕಿತ ಪಡೆಯಲು ನಿರ್ಧರಿಸಿದೆ. ಇನ್ನು ಮೈಕ್ರೋಫೈನಾನ್ಸ್ ವಿಚಾರದ ಸುಗ್ರೀವಾಜ್ಞೆಗೆ ಸಂಬಂಧಿಸಿ ಮತ್ತೊಂದು ಹಂತದ ಸಭೆ ನಡೆಯಲಿದೆ. ಕ್ಯಾಬಿನೆಟ್ ಸಿಎಂಗೆ ನಿರ್ಣಯ ಕೈಗೊಳ್ಳುವ ಪರಮಾಧಿಕಾರ ನೀಡಿದ್ದು, ಕೆಲವು ಅಂಶಗಳನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಈ ಕಾರಣಕ್ಕೆ ಚರ್ಚೆಯ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.
ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ಕೆ ಪಾಟೀಲ್, ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಅಮಾನವೀಯವಾಗಿ ಮೈಕ್ರೋ ಪೈನಾನ್ಸ್ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ನಡೆದಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶ ಚರ್ಚಿಸಿದ್ದೇವೆ. ಇಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ.
ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ. ಸಂಪುಟ ಸಭೆಯಲ್ಲಿ ಸಂಪೂರ್ಣ ಅಧಿಕಾರ ಸಿಎಂ ಅವರಿಗೆ ನೀಡಲಾಗಿದೆ. ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ. ಕೆಲವು ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ ಎಂದು ತಿಳಿಸಿದರು.