ಬೆಂಗಳೂರು : ಬಂಡೆಯಂತೆ ಆರ್ಭಟಿಸಬೇಕಿದ್ದ ಡಿ.ಕೆ. ಶಿವಕುಮಾರ್ ಸೈಲೆಂಟ್ ಆಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕುಟುಕಿದ್ದಾರೆ.
ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಪೂರ್ಣಾವಧಿ ಸಿಎಂ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಡಿ.ಕೆ. ಶಿವಕುಮಾರ್ ಅವರ ಮೆದು ಮಾತುಗಳ ಪ್ರತಿಕ್ರಿಯೆ ಗಮನಿಸಿದರೆ ಅವರಲ್ಲಿ ರಾಜಕೀಯ ಹತಾಶೆ ಮುತ್ತಿದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಎಂದು ಅವರ ಹಿಂಬಾಲಕರ ಮೂಲಕ ಹೇಳಿಸಿ, ಉಪಮುಖ್ಯಮಂತ್ರಿಗಳನ್ನು ಮುಜುಗರಕ್ಕೆ ಸಿಲುಕಿಸುತ್ತಿದ್ದರು. ಇದೀಗ ತಮ್ಮ ಪುತ್ರ ಡಾ. ಯತೀಂದ್ರ ಅವರ ಮೂಲಕ ತಂದೆಯವರ ಪೂರ್ಣಾವಧಿ ಮುಖ್ಯಮಂತ್ರಿ ಸ್ಥಾನ ಅಬಾಧಿತ ಎಂದು ಹೇಳಿಕೆ ಕೊಡಿಸಿದ್ದಾರೆ. ಸ್ವಪಕ್ಷೀಯ ವೀರೋಧಿಗಳ ದಾಳ ಡಿ.ಕೆ. ಶಿವಕುಮಾರ್ ಅವರಲ್ಲಿ ರಾಯಕೀಯ ಪಲಾಯನದ ಮಾತನಾಡಿಸುತ್ತಿರುವಂತಿದೆ ಎಂದು ಚಾಟಿ ಬೀಸಿದ್ದಾರೆ.