ನವದೆಹಲಿ: ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ದೆಹಲಿಯ ನಿಗಮ ಬೋಧ್ ಘಾಟ್ನಲ್ಲಿ ಸಿಖ್ ಧರ್ಮದ ಸಂಪ್ರದಾಯದಂತೆ ಸಿಂಗ್ ಅವರ ಅಂತಿಮ ಸಂಸ್ಕಾರ ನಡೆಯಿತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನವದೆಹಲಿಯ ಸ್ವಗೃಹದಿಂದ ಕಾಂಗ್ರೆಸ್ನ ಪ್ರಧಾನ ಕಚೇರಿಗೆ ಪಾರ್ಥಿವ ಶರೀರವನ್ನು ಕರೆ ತಂದ ಬಳಿಕ ಅಲ್ಲಿ ಅವರಿಗೆ ಅಂತಿಮ ಗೌರವ ಸಲ್ಲಿಸಲಾಯಿತು.
ಆ ಬಳಿಕ ನಿಗಮಬೋಧ್ ಘಾಟ್ಗೆ ಅಂತಿಮ ಯಾತ್ರೆಯನ್ನು ಸಾವಿರಾರು ಮಂದಿಯ ಸಮ್ಮುಖದಲ್ಲಿ ಕರೆತರಲಾಯಿತು. ಪಾರ್ಥೀವ ಶರೀರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಹೆಗಲು ಕೊಟ್ಟರು. ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ,
ಕಪ್ಪು ಬಳೆಯನ್ನು ಏಕೆ ಧರಿಸಬಾರದು..? ಅದನ್ನು ಧರಿಸಿದರೆ ಏನಾಗುತ್ತದೆ..? ಇಲ್ಲಿದೆ ಉತ್ತರ
ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್ ಓಂ ಬಿರ್ಲಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ರಿಂದ ಹಿಡಿದು ಪ್ರಮುಖ ಗಣ್ಯರು, ಕೈ ನಾಯಕರು, ವಿದೇಶಿ ರಾಜತಾಂತ್ರಿಕರು ಪಾಲ್ಗೊಂಡರು. ಮೂರು ಸೇನಾಪಡೆಯಿಂದ ಗೌರವ ಸಮರ್ಪಣೆ ಮಾಡಲಾಯಿತು.
ರಾಷ್ಟ್ರ ನಾಯಕರುಗಳು ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಿದ ಬಳಿಕ, ಮೂರು ಸೇನಾ ಪಡೆಗಳಿಂದ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ನಂತರ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಹೊದಿಸಲಾಗಿದ್ದ ರಾಷ್ಟ್ರಧ್ವಜವನ್ನು ಮನಮೋಹನ್ ಸಿಂಗ್ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಬಳಿಕ ಸಿಖ್ ಧರ್ಮದ ಧಾರ್ಮಿಕ ಕ್ರಮದಂತೆ ಶ್ಲೋಕಗಳನ್ನು ಪಠಣೆ ಮಾಡಿ, ಮಧ್ಯಾಹ್ನ 12.55 ಕ್ಕೆ ಸರಿಯಾಗಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು.