ಇಂದು ಮಧ್ಯಾಹ್ನ ನಿರ್ಮಾಪಕ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ

ಸ್ಯಾಂಡಲ್ ವುಡ್ ನಿರ್ಮಾಪಕ, ಉದ್ಯಮಿ ಸೌಂದರ್ಯ ಜಗದೀಶ್ ಏ.14ರಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾರೆ. ಬಳಿಕ ಎಂ.ಎಸ್​. ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಯಿತು. ಮಧ್ಯಾಹ್ನದ ವೇಳೆಗೆ ಸೌಂದರ್ಯ ಜಗದೀಶ್​ ಅವರ ಮೃತದೇಹವನ್ನು ಮನೆಗೆ ತೆಗೆದುಕೊಂಡು ಬರಲಾಗಿದೆ. ಇಂದು ಚೆನ್ನರಾಯಪಟ್ಟಣ ತಾಲೂಕಿನ ಹಿರಿಸಾವೆಯಲ್ಲಿ ಸೌಂದರ್ಯ ಜಗದೀಶ್​ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ 9 ಗಂಟೆವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಮಧ್ಯಾಹ್ನ 12 ಗಂಟೆಯಿಂದ 1 ಗಂಟೆ ಒಳಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು … Continue reading ಇಂದು ಮಧ್ಯಾಹ್ನ ನಿರ್ಮಾಪಕ ಸೌಂದರ್ಯ ಜಗದೀಶ್ ಅಂತ್ಯಕ್ರಿಯೆ