ಬ್ರೆಜಿಲ್ ನಲ್ಲಿ ಆಯೋಜಿಸಿದ 19ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಜಾಗತಿಕ ನಾಯಕರು ಬಡತನ ನಿವಾರಣೆ, ಆಹಾರ ಭದ್ರತೆ ಮತ್ತು ಜಾಗತಿಕ ಆಡಳಿತ ಸುಧಾರಣೆಗಳಂತಹ ನಿರ್ಣಾಯಕ ವಿಷಯಗಳ ಕುರಿತು ಕುರಿತು ಪ್ರಧಾನಿ ಮೋದಿ ಚರ್ಚೆ ನಡೆಸಿದರು. ಅಂತರ್ಗತ ಅಭಿವೃದ್ಧಿ ಮತ್ತು ಜಾಗತಿಕ ದಕ್ಷಿಣದ ಆಕಾಂಕ್ಷೆಗಳಿಗೆ ಭಾರತದ ಬದ್ಧತೆಯನ್ನು ಇದೇ ವೇಳೆ ಮೋದಿ ಪುನರುಚ್ಚರಿಸಿದರು.
ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಗ್ಲೋಬಲ್ ಸೌತ್ಗಾಗಿ ಧ್ವನಿ ಎತ್ತಿದ್ದಾರೆ. ಈ ಪ್ರದೇಶದ ಸವಾಲುಗಳು ಮತ್ತು ಆದ್ಯತೆಗಳನ್ನು ಮನಸ್ಸಿನಲ್ಲಿಟ್ಟುಕೊಂಡಾಗ ಮಾತ್ರ ಜಾಗತಿಕ ವೇದಿಕೆಯಲ್ಲಿ ನಡೆಯುತ್ತಿರುವ ಚರ್ಚೆಗಳು ಯಶಸ್ವಿಯಾಗಲು ಸಾಧ್ಯ ಎಂದು ಮೋದಿ ಒತ್ತಿ ಹೇಳಿದ್ದಾರೆ.
“ಜಾಗತಿಕ ಸಂಘರ್ಷಗಳಿಂದ ಉಂಟಾದ ಆಹಾರ, ಇಂಧನ ಮತ್ತು ರಸಗೊಬ್ಬರ ಬಿಕ್ಕಟ್ಟಿನಿಂದ ಜಾಗತಿಕ ದಕ್ಷಿಣದ ದೇಶಗಳ ಮೇಲೆ ಹೆಚ್ಚು ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ನಾವು ಜಾಗತಿಕ ದಕ್ಷಿಣದ ಸವಾಲುಗಳು ಮತ್ತು ಆದ್ಯತೆಗಳನ್ನು ಮನಸ್ಸಿನಲ್ಲಿಟ್ಟುಕೊಂಡಾಗ ಮಾತ್ರ ನಮ್ಮ ಚರ್ಚೆಗಳು ಯಶಸ್ವಿಯಾಗುತ್ತವೆ ಎಂದು ಪ್ರಧಾನಿ ಮೋದಿ ತಿಳಿಸಿದರು.
ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಆದ್ಯತೆ ನೀಡಿರುವುದು ಅತ್ಯಂತ ತೃಪ್ತಿಯ ವಿಷಯವಾಗಿದೆ. ನಾವು ಅಂತರ್ಗತ ಅಭಿವೃದ್ಧಿ, ಮಹಿಳಾ ನೇತೃತ್ವದ ಅಭಿವೃದ್ಧಿ ಮತ್ತು ಯುವ ಶಕ್ತಿಯ ಮೇಲೆ ಕೇಂದ್ರೀಕರಿಸಿದ್ದೇವೆ. ಗ್ಲೋಬಲ್ ಸೌತ್ನ ಭರವಸೆಗಳು ಮತ್ತು ಆಕಾಂಕ್ಷೆಗಳಿಗೆ ರೆಕ್ಕೆಗಳನ್ನು ನೀಡಿದ್ದೇವೆ ಎಂದು ಮೋದಿ ಹೇಳಿದ್ದಾರೆ.