ಗದಗ : ನಗರದ ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಿತು. ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಬಸವರಾಜ ಅವರು ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಜ್ಯೋತಿ ಬೆಳಗಿ ಪೊಲೀಸ್ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಸಧೃಡವಾದ ಆರೋಗ್ಯ ಇದ್ದರೆ ಸಧೃಡ ಮನಸ್ಸು ಇರುತ್ತದೆ ಎಂದರು. ಸ್ವಾಸ್ಥ್ಯ ಸಮಾಜಕ್ಕಾಗಿ ಹಗಲಿರುಳೆನ್ನದೇ ಪ್ರತಿನಿತ್ಯ ಕರ್ತವ್ಯದಲ್ಲಿ ಬ್ಯುಸಿಯಾಗಿದ್ದ ಪೊಲೀಸ್ ಸಿಬ್ಬಂದಿ ಫುಲ್ ಜೋಶ್ ನಲ್ಲಿ ಕ್ರೀಡಾಕೂಟದಲ್ಲಿ ಪಾಲ್ಗೊಂಡರು. ಹೆಚ್ಚುವರಿ ಪೊಲಿಸ್ ವರಿಷ್ಠಾಧಿಕಾರಿ ಎಸ್ ಬಿ ಸಂಕದ, ನರಗುಂದ ಡಿವಾಯ್ಎಸ್ಪಿ ಪ್ರಭುಗೌಡ ಪಾಟೀಲ್, ಸಿಇಎನ್ ಡಿವೈಎಸ್ಪಿ ಮಹಾಂತೇಶ ಸಜ್ಜನ್, ಡಿಎಆರ್ ಡಿಎಸ್ಪಿ ವಿದ್ಯಾನಂದ ನಾಯಕ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
12 ವರ್ಷಗಳ ಹಿಂದಿನ ಗ್ಯಾಂಗ್ ರೇಪ್ ಪ್ರಕರಣ : ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ