ಗದಗ: ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನದ ಎದುರು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ನಂತರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ವೇಳೆ ಮುಖಂಡರು ಮಾತನಾಡಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು.
ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ರು.