ಗದಗ: ಜಾತಿ ಗಣತಿ ಅಂಗೀಕಾರಕ್ಕೆ ಒತ್ತಾಯಿಸಿ ಪ್ರತಿಭಟನೆ!

ಗದಗ: ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಅನುಷ್ಠಾನ ಮಾಡಬೇಕು ಎಂದು ಒತ್ತಾಯಿಸಿ ಗದಗ ಜಿಲ್ಲಾಡಳಿತ ಭವನದ ಎದುರು ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಕೊಲೆ ಆರೋಪಿ ದರ್ಶನ್‌ ನೋಡಲು ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ! ನಂತರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ವೇಳೆ ಮುಖಂಡರು ಮಾತನಾಡಿ, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಶೀಘ್ರ ಅನುಷ್ಠಾನ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ರು.