ಗದಗ:- ಕರವೇ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.
ನಗರದ ಮುಳಗುಂದ ನಾಕಾದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆದಿದ್ದು, ರಾಜ್ಯ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಬೇಶರತ್ ನಾರಾಯಣಗೌಡರನ್ನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ ಸಲ್ಲಿಕೆ ಮಾಡಲಾಗಿದೆ.