ಗದಗ:- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಅದರಂತೆ ಗದಗನಲ್ಲಿಯೂ ಕೂಡ ಇಂದು 2 ಪಾಸಿಟಿವ್ ಕೇಸ್ ಪತ್ತೆ ಆಗಿದ್ದು, ಜಿಲ್ಲಾಡಳಿತ ಫುಲ್ ಅಲರ್ಟ್ ಆಗಿದೆ.
ಇನ್ನೂ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು 158 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 568 ಹಾಗೂ ಸೋಂಕು ಪ್ರಮಾಣ ದರ ಶೇ. 1.89 ತಲುಪಿದೆ.
ಕಳೆದ 24 ಗಂಟೆಗಳಲ್ಲಿ 8,350 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಬೆಂಗಳೂರಿನಲ್ಲಿ 85, ಮೈಸೂರು 12, ದಕ್ಷಿಣ ಕನ್ನಡ 8, ಚಾಮರಾಜನಗರ 7, ವಿಜಯನಗರ 6, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ರಾಮನಗರದಲ್ಲಿ ತಲಾ 5, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ತಲಾ 4, ಚಿಕ್ಕಮಗಳೂರು ಮತ್ತು ಕೋಲಾರದಲ್ಲಿ ತಲಾ 3, ಚಿಕ್ಕಬಳ್ಳಾಪುರ, ಧಾರವಾಡ, ಗದಗ ಹಾಗೂ ಹಾಸನ ತಲಾ ಇಬ್ಬರು ಮತ್ತು ಬೀದರ್, ಕಲಬುರಗಿ, ಕೊಪ್ಪಳದಲ್ಲಿ ತಲಾ ಒಬ್ಬರಂತೆ 158 ಮಂದಿ ಸೋಂಕಿಗೆ ಒಳಗಾಗಿದ್ದಾರೆ.