ಗದಗ : ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ಅವರು ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಕೊಠಡಿಗೆ ದಿಢೀರ್ ಭೇಟಿ ನೀಡಿ ಮಧ್ಯಾಹ್ನದ ಬಿಸಿಯೂಟ ಸವಿದು ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟ ಪರೀಶೀಲಿಸಿದರು
ಡಂಬಳ, ಮೇವುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡಿದ್ದ ವಿವಿಧ ಕಾಮಗಾರಿಗಳ ಪರೀಶೀಲನೆಗೆ ಆಗಮಿಸಿದ್ದ ವೇಳೆ ಅವರು ವಿವಿಧ ಸರಕಾರಿ ಶಾಲೆಗಳಿಗೂ ದಿಢೀರ್ ಭೇಟಿ ನೀಡಿ ಬೋಧನಾ ಗುಣಮಟ್ಟ, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ, ಅಡುಗೆ ಕೋಣೆಗಳಿಗೆ ಭೇಟಿ ನೀಡಿ ಸ್ವಚ್ಛತೆಯನ್ನು ಅವಲೋಕಿಸಿದರು.