ಹುಬ್ಬಳ್ಳಿ;– ವಾಣಿಜ್ಯನಗರಿ ಹುಬ್ಬಳ್ಳಿಯ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಬೆನ್ನಲ್ಲೇ ಸೋಮವಾರ ಭಾರೀ ಪೊಲೀಸ್ ಭದ್ರತೆ ನಡುವೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನೊಂದು ಕಡೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಾಕ ಪೊಲೀಸ್ ಭದ್ರತೆ ನಿಯೋಜನೆ ಮಾಡಿದ್ದು ಇಂದು ನಗರದ ಪ್ರಮುಖ ಬೀದಿಗಳಲ್ಲಿ ಸುಮಾರು 5000 ಸಾವಿರಾರು ಪೊಲೀಸರು ಪಥಸಂಚನ ನಡೆಸಲಾಯಿತು
ನಾಲ್ಕು ಸಂಘಟನೆಗಳಲ್ಲಿ ಒಂದಕ್ಕೆ ಮೂರು ದಿನ ಗಣೇಶೋತ್ಸವ ಆಚರಣೆ ಮಾಡಲು ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತಿದೆ. ಇನ್ನೊಂದೆಡೆ ಈ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಾಕಷ್ಟು ಬೆಳವಣಿಗೆ ಸಹ ನಡೆಯುತಿದ್ದು, ಹುಬ್ಬಳ್ಳಿ ಅಂಜುಮನ್ ಇಸ್ಲಾಂ ಸಮಿತಿ ಕಾನೂನು ಹೋರಾಟಕ್ಕೆ ಸಹ ಪ್ಲಾನ್ ಮಾಡಿ ಹಿನ್ನಲೆಯಲ್ಲಿ ಈ ಸಲ ಅತ್ಯಂತ ಸೂಕ್ಷ್ಮವಾದ ವಾತಾವರಣ ಇದೆ.. ಈ ಎಲ್ಲ ಬೆಳವಣಿಗೆಗಳ ನಡುವೆ ಮೈದಾನಕ್ಕೆ ಭಾರೀ ಬಿಗಿ ಪೊಲೀಸ್ ಭದ್ರತೆಯನ್ನು ನೀಡಲಾಗಿದೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಕಡೆ 1500 ಕ್ಕೋ ಹೆಚ್ಚು ಪೊಲೀಸ್ ಸಿಬ್ಬಂದಿ ಸೇರಿದಂತೆ ಕೆಎಸ್ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ವತಃ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಉಸ್ತುವಾರಿ ವಹಿಸಿದ್ದು ಇದೇ ವೇಳೆ ಸುಮಾರು 5000 ಪೊಲೀಸ್ ಸಿಬ್ಬಂದಿ, ಹಿರಿಯ ಪೊಲೀಸ್ ಅಧಿಕಾರಿಗಳು, ಆರ್ ಐಎಫ್, ಸಿಎಎಫ್ ಕೆಎಸ್ ಆರ್ ಪಿ ತುಕುಡಿ, ಸಿಆರ್ ತಂಡಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದರು
