ಹುಬ್ಬಳ್ಳಿ: ಹಾವೇರಿ ಜಿಲ್ಲೆಯ ಹಾನಗಲ್ ಪ್ರಕರಣವನ್ನು ಅಲ್ಲಿಯ ಪೊಲೀಸರು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು, ಅದು ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿ ದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು, ದುಡ್ಡು ಕೊಟ್ಟು ಆಮಿಷವೊಡ್ಡಿ ಪ್ರಕರಣ ಹಿಂಪಡೆಯಲು ಮಾಡಿದ ಪ್ರಯತ್ನ ಮಾಡಿದ್ರುಲೋಕಲ್ ಪೊಲೀಸರು ಕೇಸನ್ನ ಮುಚ್ಚಿ ಹಾಕ್ತಾರೆ, ಅದನ್ನ ಎಸ್ಐಟಿಗೆ ಒಪ್ಪಿಸಿ ಅಂತ ಹೇಳಿದ್ದೇನೆ ನಾಳೆ ಹಾವೇರಿಗೆ ಬರಲಿರುವ ಸಿಎಂ ಪ್ರಕರಣ ಎಸ್ಐಟಿಗೆ ಒಪ್ಪಿಸುವ ಘೋಷಣೆ ಮಾಡ್ತಾರೆ ಅಂತಾ ನಿರೀಕ್ಷಿಸುತ್ತೇನೆ ಎಂದರು.
ಎಸ್ಐಟಿ ರಚಿಸಲು ಆಗ್ರಹ:
ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು.
ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ಒತ್ತಾಯಿಸಿದರು. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 3 ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದ ಅವರು ಇಂದು ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು. ಸಾಮಾನ್ಯರು ನಿರ್ಭೀತಿಯಿಂದ ಓಡಾಡಲು ಸಾಧ್ಯವಾಗುತ್ತಿಲ್ಲ. ಎಲ್ಲ ಹೆಣ್ಮಕ್ಕಳು ಆತಂಕದಿಂದ ಓಡಾಡುವಂತಾಗಿದೆ. ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಬೆಂಗಳೂರು ಒಂದರಲ್ಲೇ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಶೇ 30ರಷ್ಟು ಹೆಚ್ಚಾಗಿವೆ ಎಂದು ಆಕ್ಷೇಪಿಸಿದರು. ಅತ್ಯಾಚಾರ, ಕಿರುಕುಳ, ಹಿಂಸಾಚಾರ ಹೆಚ್ಚಾಗಿದೆ. ಗ್ರಾಮಾಂತರದಲ್ಲೂ ಮಹಿಳೆಯರು ಸುರಕ್ಷಿತವಾಗಿಲ್ಲ. ಇಂಥ ಹಲವಾರು ಪ್ರಕರಣಗಳನ್ನು ಮುಚ್ಚಿಹಾಕುತ್ತಿದ್ದಾರೆ ಎಂದು ಆರೋಪಿಸಿದರು