ಭೂಪಾಲ್:- ಮಧ್ಯಪ್ರದೇಶದ ಮೌಗಂಜ್ನಲ್ಲಿ ಅಂಬುಲೆನ್ಸ್ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಜರುಗಿದೆ.
ಘಟನೆ ಸಂಬಂಧ ಅಂಬ್ಯುಲೆನ್ಸ್ ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್ನನ್ನು ಬಂಧಿಸಿದ್ದಾರೆ. ಮೌಗಂಜ್ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಗ್ರಾಮೀಣ ಭಾಗದ ಮಹಿಳೆಯರು, ಮಕ್ಕಳು ಹಾಗೂ ಬಿಪಿಎಲ್ ಕುಟುಂಬಗಳ ಆರೋಗ್ಯ ರಕ್ಷಣೆಗಾಗಿ ಜನನಿ ಎಕ್ಸ್ಪ್ರೆಸ್ ಅಂಬುಲೆನ್ಸ್ ಸೌಲಭ್ಯ ಒದಗಿಸಿತ್ತು. ಈ 108 ಅಂಬುಲೆನ್ಸ್ನಲ್ಲೇ ಕೃತ್ಯ ನಡೆದಿದೆ
ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಸಾಕೇತ್ ಪಾಂಡೆ ಮಾಹಿತಿ ಪ್ರಕಾರ, ಅಪ್ರಾಪ್ತೆಯು ತನ್ನ ಸಹೋದರಿ ಹಾಗೂ ಮಾವನೊಂದಿಗೆ ಅಂಬುಲೆನ್ಸ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಾಲಕ ಹಾಗೂ ಆತನ ಮೂವರು ಸಹಚರರು ಸಹ ಅಂಬುಲೆನ್ಸ್ನಲ್ಲಿದ್ದರು. ಮಾರ್ಗಮಧ್ಯೆ ನೀರು ತರಲೆಂದು ಬಾಲಕಿಯ ಸಹೋದರಿ ಹಾಗೂ ಆಕೆಯ ಮಾವ ಕೆಳಗಿಳಿದಿದ್ದಾರೆ. ಅವರಿಗಾಗಿ ಕಾಯದೇ ಅಂಬುಲೆನ್ಸ್ನ್ನೂ ಚಲಾಯಿಸಿಕೊಂಡು ಬಂದಿದ್ದು, ಚಾಲಕನ ಸ್ನೇಹಿತ ರಾಕೇಶ್ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.