ಜೈಪುರ:- ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಸಹ ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಕೋಚಿಂಗ್ ಹಬ್ ಕೋಟಾದಲ್ಲಿ ಜರುಗಿದೆ
ಅಪ್ರಾಪ್ತ ವಿದ್ಯಾರ್ಥಿನಿಯನ್ನು ಫ್ಲಾಟ್ಗೆ ಕರೆಸಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ತಿಳಿಸಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಮುಖ ಆರೋಪಿಯೊಬ್ಬನ ಪರಿಚಯವಾಗಿತ್ತು. ಈ ಘಟನೆ ಫೆಬ್ರವರಿ 10 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿರುವ ಕೋಟ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.