ಉತ್ತರ ಪ್ರದೇಶ:- ಇಲ್ಲಿನ ಖುಷಿನಗರದಲ್ಲಿ ಬರ್ತ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಇಬ್ಬರು ನೃತ್ಯಗಾರ್ತಿಯರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜರುಗಿದೆ.
ಇಬ್ಬರು ನೃತ್ಯಗಾರ್ತಿಯರನ್ನು ಹಣೆಗೆ ಬಂದೂಕಿಟ್ಟು ಅಪಹರಿಸಿ 10 ಕಿ.ಮೀ ದೂರಕ್ಕೆ ಕರೆದೊಯ್ದಿದ್ದಾರೆ. ಆರೋಪಿಗಳಲ್ಲಿ ಒಬ್ಬನ ಮನೆಗೆ ಕರೆದೊಯ್ದಿದ್ದಾರೆ, ಬರ್ತ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡುವಂತೆ ಆ ಇಬ್ಬರು ಯುವತಿಯರ ಬಳಿ ಕೇಳಿದ್ದಾರೆ. ಆದರೆ ಅವರು ನಿರಾಕರಿಸಿದ್ದಕ್ಕೆ ಕುಡಿದ ಮತ್ತಿನಲ್ಲಿ ಇಬ್ಬರ ಮೇಲೆ 8 ಮಂದಿ ಅತ್ಯಾಚಾರವೆಸಗಿದ್ದಾರೆ.
ಇದೀಗ ಪೊಲೀಸರು ಅಪರಾಧಕ್ಕೆ ಬಳಸಿದ್ದ ಎರಡು ಎಸ್ಯುವಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಎಲ್ಲಾ ಎಂಟು ಆರೋಪಿಗಳ ವಯಸ್ಸು 30 ವರ್ಷಕ್ಕಿಂತ ಕಡಿಮೆ. ಆರೋಪಿಗಳನ್ನು ಖುಷಿನಗರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.