ಬೆಂಗಳೂರು: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ ಸಂಬಂಧ ಮಾಜಿ ಸಿಎಂ ಯಡಿಯೂರಪ್ಪನವರು (BS Yediyurappa) ಲೋಕಾಯುಕ್ತ ವಿಚಾರಣೆ ಎದುರಿಸಿದ್ದಾರೆ.
ಸುಮಾರು ಒಂದೂವರೆ ಗಂಟೆಗಳ ಕಾಲ ವಿಚಾರಣೆ ಎದುರಿಸಿದ ಬಳಿಕ ಯಡಿಯೂರಪ್ಪ ಲೋಕಾಯುಕ್ತ ಕಚೇರಿಯಿಂದ ನಿರ್ಗಮಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೂ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡುವ ಸಾಧ್ಯತೆಯಿದೆ.
ಈ ಸಂಬಂಧ ಗುರುವಾರ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ ಸಚಿವರಾದ ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್ 2015ರಲ್ಲಿ ಲೋಕಾಯುಕ್ತದಲ್ಲಿ (Lokayukta) ಕೇಸ್ ದಾಖಲಾದರೂ ಈವರೆಗೂ ತನಿಖೆ ಪೂರ್ತಿಯಾಗಿಲ್ಲ. 2021ರಿಂದ ಲೋಕಾಯುಕ್ತದಲ್ಲಿ ಈ ಕೇಸ್ ವಿಚಾರದಲ್ಲಿ ಯಾವುದೇ ಪ್ರಗತಿಯಾಗಿಲ್ಲ ಎಂದು ಕಿಡಿಕಾರಿದ್ದರು.