ಬೆಂಗಳೂರು: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆ ದೆಹಲಿಯಿಂದ ನೇರವಾಗಿ ಲೋಕಾ ಕಚೇರಿಗೆ ಆಗಮಿಸಿದ ಎಚ್ ಡಿ ಕುಮಾರಸ್ವಾಮಿ
ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ನೀಡಲಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು. ಹಾಗಾಗಿ ಬೆಂಗಳೂರು ಏರ್ಪೋರ್ಟ್ನಿಂದ ಹೊರಟು ಯಲಹಂಕ ಬಳಿ ಬರುತ್ತಿರುವ ಕುಮಾರಸ್ವಾಮಿ ಡಿವೈಎಸ್ಪಿ ಬಸವರಾಜ್ ಮುಗುದಂ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸತತ 3 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.