ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ನಮಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ.
ಗೆಲುವಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್, ತಂಡದ ಸಾಂಘಿಕ ಪ್ರದರ್ಶನಕ್ಕೆ ಮೆಚ್ಚುಗೆಗಳನ್ನು ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಆಟಗಾರರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿರುವ ಗೌತಮ್ ಗಂಭೀರ್ ಅವರ ನಡೆಯನ್ನು ಹಾಡಿ ಹೊಗಳಿದಿದ್ದಾರೆ.
ಬದನೇಕಾಯಿ ಕೇವಲ ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲ, ಆರೋಗ್ಯಕ್ಕೂ ಉತ್ತಮ!
ಟಾಸ್ ಗೆದ್ದಾಗಲೇ, ನಮ್ಮ ಆಟಗಾರರಲ್ಲಿ ಎನರ್ಜಿ ಕಾಣಿಸಿತು. ಏಕೆಂದರೆ ಸೆಕೆಂಡ್ ಇನಿಂಗ್ಸ್ ವೇಳೆ ಇಬ್ಬನಿ ಇರುವ ಸೂಚನೆಯಿದ್ದ ಕಾರಣ ಈ ಪಂದ್ಯದಲ್ಲಿ ಟಾಸ್ ನಿರ್ಣಾಯಕವಾಗಿತ್ತು. ಟಾಸ್ ಗೆಲುವಿನ ಸಂಪೂರ್ಣ ಲಾಭ ಪಡೆದ ಟೀಮ್ ಇಂಡಿಯಾ ಬೌಲರ್ಗಳು ಅತ್ಯುತ್ತಮ ದಾಳಿ ಸಂಘಟಿಸಿದರು ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.
ಹೊಸ ಬಾಲ್ನಲ್ಲಿ ಹಾರ್ದಿಕ್ ಪಾಂಡ್ಯ ಅದ್ಭುತವಾಗಿ ಬೌಲಿಂಗ್ ಮಾಡಿದರು. ಇನ್ನು ಹರಿಹರೆಯದ ಅರ್ಷದೀಪ್ ಸಿಂಗ್ ಹೆಚ್ಚುವರಿ ಜವಾಬ್ದಾರಿಯೊಂದಿಗೆ ದಾಳಿ ಸಂಘಟಿಸುತ್ತಿರುವುದು ಖುಷಿಯ ವಿಚಾರ. ಹಾಗೆಯೇ ವರುಣ್ ಚಕ್ರವರ್ತಿಗೆ ತಾನೇನು ಮಾಡಬೇಕೆಂದು ಚೆನ್ನಾಗಿ ತಿಳಿದಿದೆ. ಹೀಗಾಗಿ ನಾಯಕನಾಗಿ ನನ್ನ ಕಾರ್ಯವು ಸುಲಭ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.
ಇವೆಲ್ಲಕ್ಕಿಂತ ಮುಖ್ಯವಾಗಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ನಮಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಹೀಗಾಗಿ ನಮ್ಮ ಜವಾಬ್ದಾರಿಗೆ ತಕ್ಕಂತೆ ಆಡಲು ಸಾಧ್ಯವಾಗುತ್ತಿದೆ. ಅಲ್ಲದೆ ನಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಅನುಕೂಲವಾಗುತ್ತಿದೆ ಎಂದು ಸೂರ್ಯಕುಮಾರ್ ಯಾದವ್ ಹೇಳಿದ್ದಾರೆ.