ರಾಹುಲ್ ದ್ರಾವಿಡ್ ಬಳಿಕ ಟೀಮ್ ಇಂಡಿಯಾದ ಮುಂದಿನ ಹೆಡ್ ಕೋಚ್ ಗೌತಮ್ ಗಂಭೀರ್ ಆಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿದೆ.
ರಾಜಸ್ಥಾನ: ಭೀಕರ ಅಪಘಾತ.. ಐವರು ಸಾವು, 12 ಜನರ ಸ್ಥಿತಿ ಗಂಭೀರ !
ದ್ರಾವಿಡ್ ಈ ಹುದ್ದೆಯಲ್ಲಿ ಮುಂದುವರೆಯಲು ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಪ್ರಸ್ತುತ ಎನ್ಸಿಎ ಅಧ್ಯಕ್ಷರಾಗಿರುವ ವಿವಿಎಸ್ ಲಕ್ಷ್ಣಣ್ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಟೀಂ ಇಂಡಿಯಾಗೆ ವಿದೇಶಿ ಕೋಚ್ ಸಿಗುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಲಾಗುತ್ತಿತ್ತು. ಆದರೀಗ ಕೇಳಿ ಬರುತ್ತಿರುವ ಸುದ್ದಿಯ ಪ್ರಕಾರ ಭಾರತದ ಮಾಜಿ ಬ್ಯಾಟ್ಸ್ಮನ್ ಗೌತಮ್ ಗಂಭೀರ್ ಅವರು ಮುಖ್ಯ ಕೋಚ್ ಹುದ್ದೆಗೇರಬಹುದು ಎಂದು ಹೇಳಲಾಗುತ್ತಿದೆ. ಪ್ರಸ್ತುತ ಐಪಿಎಲ್ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ನ ಮಾರ್ಗದರ್ಶಕರಾಗಿರುವ ಗಂಭೀರ್ ಅವರನ್ನು ಮುಖ್ಯ ಕೋಚ್ ಹುದ್ದೆಗೇರುವಂತೆ ಬಿಸಿಸಿಐ ಮನವಿ ಮಾಡಿದೆ ಎಂದು ಹೇಳಲಾಗುತ್ತಿದೆ. ಪ್ರಸ್ತುತ ಐಪಿಎಲ್ನಲ್ಲಿ ಕೆಕೆಆರ್ ತಂಡದ ಭಾಗವಾಗಿರುವ ಗಂಭೀರ್, ಬಿಸಿಸಿಐ ಮನವಿಯನ್ನು ಪುರಸ್ಕರಿಸುತ್ತಾರಾ ಅಥವಾ ತಿರಸ್ಕರಿಸುತ್ತಾರಾ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ. ಒಂದು ವೇಳೆ ಗಂಭೀರ್ ಈ ಮನವಿಗೆ ಒಪ್ಪಿದರೆ ಅವರು ಕೆಕೆಆರ್ ತಂಡವನ್ನು ತೊರೆಯಬೇಕಾಗುತ್ತದೆ. ಏಕೆಂದರೆ ಬಿಸಿಸಿಐ ಒಪ್ಪಂದಕ್ಕೆ ಒಳಪಡುವವರು ಇತರ ಲೀಗ್ಗಳಲ್ಲಿ ಕೆಲಸ ಮಾಡುವಂತಿಲ್ಲ.
ವಾಸ್ತವವಾಗಿ ಐಪಿಎಲ್ನಲ್ಲಿ ಸಾಕಷ್ಟು ಯಶಸ್ಸು ಗಳಿಸಿರುವ ಗೌತಮ್ ಗಂಭೀರ್ಗೆ ಅಂತರಾಷ್ಟ್ರೀಯ ಮತ್ತು ದೇಶೀಯ ಮಟ್ಟದಲ್ಲಿ ತರಬೇತಿ ನೀಡಿದ ಅನುಭವವಿಲ್ಲ. ಅವರು ಐಪಿಎಲ್ ಫ್ರಾಂಚೈಸಿಯಲ್ಲಿ ಕೋಚಿಂಗ್ ಸಿಬ್ಬಂದಿಯ ಉಸ್ತುವಾರಿ ವಹಿಸಿದ್ದಾರೆ. ಅವರು ಐಪಿಎಲ್ 2022 ಮತ್ತು 2023 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ನ ಮಾರ್ಗದರ್ಶಕರಾಗಿದ್ದರು. ಪ್ರಸ್ತುತ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾರ್ಗದರ್ಶಕರಾಗಿರುವ ಗಂಭೀರ್ ಅಡಿಯಲ್ಲಿ ಕೆಕೆಆರ್ ತಂಡದ ಪ್ರದರ್ಶನ ಅತ್ಯುತ್ತಮವಾಗಿದೆ. ಆಡಿರುವ 13 ಪಂದ್ಯಗಳಲ್ಲಿ 9 ಪಂದ್ಯಗಳಲ್ಲಿ ಗೆದ್ದಿರುವ ತಂಡ 3 ಪಂದ್ಯಗಳಲ್ಲಿ ಸೋಲು ಕಂಡಿದೆ. ಹೀಗಾಗಿ 19 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)