ಬೆಂಗಳೂರು: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ (Makar Sankranti) ಆರಂಭವಾಗಿದೆ. ಸಂಕ್ರಾತಿ ದಿನದಂದೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯ (Gavi Gangadhareshwara Temple) ವಿಶೇಷ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ.
ಈ ದಿನ ಸೂರ್ಯರಶ್ಮಿ ಶಿವನನ್ನು ಸ್ಪರ್ಶಿಸುವ ವಿಶೇಷ ಕೌತುಕ ನಡೆಯಲಿದೆ. ಸೂರ್ಯ ದಕ್ಷಿಣಪಥ ದಿಂದ ಉತ್ತರಕ್ಕೆ ಪಥ ಸಂಚಲನ ಮಾಡುವ ವೇಳೆ ಶಿವನ ಮೂರ್ತಿಯನ್ನು ಸ್ಪರ್ಶಿಸಲಿದ್ದಾನೆ. ಸಂಜೆ 5.20 ರಿಂದ 5.23 ನಿಮಿಷದ ವರೆಗೆ ಸೂರ್ಯರಶ್ಮಿ ಶಿವನಿಗೆ ನಮಿಸಲಿದೆ. ಲಿಂಗಭಾಗದಲ್ಲಿ ಎಷ್ಟು ಸಮಯ ಸೂರ್ಯರಶ್ಮಿ ಇರುತ್ತೆ ಅನ್ನೋದರ ಮೇಲೆ ಹೊಸ ವರ್ಷದ ಭವಿಷ್ಯ ಇರಲಿದೆ ಅನ್ನೋದು ನಂಬಿಕೆ.
ದೇವಸ್ಥಾನದಲ್ಲಿ ಬೆಳಗ್ಗೆ 5 ಗಂಟೆಗೆ ವಿಶೇಷಪೂಜೆ, ಅಲಂಕಾರ ಮೂಲಕ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ದೇವಸ್ಥಾನ ಓಪನ್ ಇರಲಿದ್ದು, ನಂತ್ರ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿರುದಿಲ್ಲ ಸಂಜೆ ಸೂರ್ಯರಶ್ಮಿ ಲಿಂಗವನ್ನ ಸ್ಮರ್ಶಿಸಿದ ನಂತ್ರ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ
ಭಕ್ತಾಧಿಗಳು ವಿಸ್ಮಯವನ್ನು ಕಣ್ತುಂಬಿಕೊಳ್ಳಲು ದೇವಾಲಯದ ಹೊರಭಾಗದಲ್ಲಿ 2 ಎಲ್ಇಡಿ ಹಾಗೂ 5 ಟಿವಿಗಳ ವ್ಯವಸ್ಥೆ ಇರಲಿದೆ. ದೇವರನ್ನ ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಅರ್ಚಕರನ್ನ ಬಿಟ್ಟರೆ ಇನ್ನುಳಿದ ಯಾರಿಗೂ ದೇವಸ್ಥಾನ ಪ್ರವೇಶ ಇರುವುದಿಲ್ಲ ಎಂದು ದೇವಾಲಯದ ಪ್ರಧಾನ ಆರ್ಚಕ ಸೋಮಸುಂದರ್ ದೀಕ್ಷೀತ್ ಮಾಹಿತಿ ನೀಡಿದ್ದಾರೆ.