ಪತ್ನಿ ಸಂಸದೆಯಾಗಲಿ ಎಂಬ ಆಸೆ ಇದೆ ಎಂದು ಹೇಳುವ ಮೂಲಕ ರಾಜಕೀಯದ ಬಗ್ಗೆ ಶಿವಣ್ಣ ಮಾತಾಡಿದ್ದಾರೆ.
ಶಿವಮೊಗ್ಗದಲ್ಲಿ ಗೀತಾ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಪ್ರಚಾರದ ಕಡೆಗೆ ಗಮನ ಹರಿಸಿಲ್ಲ. ಕೆಲಸಗಳ ಬಗ್ಗೆ ಜನರೊಂದಿಗೆ ಇದ್ದರೆ ಸಾಕು ಎಂದು ಶಿವರಾಜ್ಕುಮಾರ್ ಅವರು ಹೇಳಿದ್ದಾರೆ.
ಇದೇ ಸಂದರ್ಭ ಮಾತನಾಡಿದ ಶಿವರಾಜ್ಕುಮಾರ್ ಅವರ ಪತ್ನಿ ಶಿವಮೊಗ್ಗದಲ್ಲಿ ಸ್ಪರ್ಧೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅವಕಾಶ ಸಿಕ್ಕರೆ ಸ್ಪರ್ಧೆ ಮಾಡುತ್ತೇನೆ. ಬಂಗಾರಧಾಮದ ಮೂಲಕ ಈಗಾಗಲೇ ಸಾಮಾಜಿಕ ಕೆಲಸ ಮಾಡುತ್ತಿದ್ದೇನೆ ಎಂದಿದ್ದಾರೆ.
ರಾಜಕೀಯ ಕ್ಷೇತ್ರವನ್ನು ಸೇವಾ ಕ್ಷೇತ್ರವಾಗಿ ಪರಿಗಣಿಸಿದ್ದೇನೆ. ಜಿಲ್ಲೆಯಲ್ಲಿ ನಾನು ಓಡಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹುಟ್ಟು ಹಬ್ಬ ಆಚರಣೆ ಹಿನ್ನಲೆ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್ ಮತ್ತಿತರರು ಭಾಗಿಯಾಗಿದ್ದರು. ಆ ಸಂದರ್ಭ ಅವರು ಮಾತನಾಡಿದ್ದಾರೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕಾಣಿಸಿಕೊಂಡ ಗೀತಾ ಶಿವರಾಜ್ ಕುಮಾರ್ ಅವರು ರಾಜಕೀಯದ ಬಗ್ಗೆಯೂ ಮಾತನಾಡಿದರು.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಸಂಭವನೀಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಗೀತಾ ಅವರು ಕೂಡಾ ರಾಜಕೀಯ ಸ್ಪರ್ಧೆ ಬಗ್ಗೆ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ಮಾಡಿದ್ದು, ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇವರಿಗೆ ಈ ದುರ್ಬುದ್ದಿ ಏಕೆ ಬಂದಿದೆಯೋ ಗೊತ್ತಿಲ್ಲ. ಇದೇ ಪ್ರಯತ್ನ ನಡೆಸಿ ವಿಫಲರಾಗಿದ್ದಾರೆ. ಈ ತನಕ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಆದರೂ ಇಂತಹ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಏನೇ ಆದರೂ ಸರ್ಕಾರ ಬೀಳಿಸುವ ಅವರ ಯತ್ನ ಸಫಲವಾಗದು ಎಂದಿದ್ದಾರೆ.