ಬೆಂಗಳೂರು:- ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಚಿಕ್ಕೋಡಿ: ತುಂಬು ಗರ್ಭಿಣಿ ಬರ್ಬರ ಹತ್ಯೆಯ ಕೀಚಕ ಅಥಣಿ ಪೋಲಿಸ್ ರ ಅಥಿತಿ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಬಂಡೀಪುರದಲ್ಲಿ ರಾತ್ರಿ 9 ಗಂಟೆವರೆಗೆ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಇದೆ. ಅದು ಹೊರತುಪಡಿಸಿ ರಾತ್ರಿ 9 ಗಂಟೆ ನಂತರ 2 ಬಸ್ಗಳ ಮಾತ್ರ ಸಂಚಾರಕ್ಕೆ ಅವಕಾಶ ಕೊಡಲಾಗಿದೆ ಎಂದರು.
ಇದನ್ನು ಹೊರತುಪಡಿಸಿ ಆಸ್ಪತ್ರೆ ಸೇರಿ ಎಮರ್ಜೆನ್ಸಿ ಇದ್ದರೆ ಅದಕ್ಕೂ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವನ್ಯಜೀವಿ ಸಂರಕ್ಷಣೆ ಹಿನ್ನಲೆ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ. ಹೀಗಾಗಿ ರಾತ್ರಿ ಸಂಚಾರ ಸಾಧ್ಯವಿಲ್ಲ. ಈ ಬಗ್ಗೆ ನಮ್ಮ ನಾಯಕರಿಗೆ ಏನಾದರೂ ಮಾಹಿತಿ ಅಗತ್ಯವಿದ್ದರೆ ಮನವರಿಕೆ ಮಾಡುತ್ತೇನೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.