ದೊಡ್ಡಬಳ್ಳಾಪುರ:- ಘಾಟಿ ಸುಬ್ರಹ್ಮಣ್ಯ ರಥೋತ್ಸವದಲ್ಲಿ ತಪ್ಪಿದ ಅನಾಹುತ ತಪ್ಪಿದ್ದು, ಕೂದಲೆಳೆ ಅಂತರದಲ್ಲಿ ಮಹಿಳೆ ಪಾರಾದ ಘಟನೆ ಜರುಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಇಂದು ಬ್ರಹ್ಮ ರಥೋತ್ಸವ ನಡೆದಿದೆ. ಬ್ರಹ್ಮ ರಥೋತ್ಸವದ ವೇಳೆ ಭಾರಿ ಅನಾಹುತವೊಂದು ತಪ್ಪಿದೆ. ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿ ಚಕ್ರದ ಬಳಿ ಮಹಿಳೆ ಬಿದ್ದಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಮತ್ತು ದೇವಸ್ಥಾನದ ಸಿಬ್ಬಂದಿ ಮಹಿಳೆಯನ್ನ ಮೇಲಕ್ಕೆ ಎತ್ತಿದಿದ್ದಾರೆ. ಬಳಿಕ ಮಹಿಳೆಯನ್ನು ಪಕ್ಕಕ್ಕೆ ಸರಿಸಿದ್ದಾರೆ. ಮಹಿಳೆ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಪುಷ್ಯ ಶುದ್ದ ಷಷ್ಟಿ ಹಿನ್ನೆಲೆಯಲ್ಲಿ ಇಂದು ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು. ಮದ್ಯಾಹ್ನ 12.15ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್ ಮುನಿಯಪ್ಪ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು