ಮೈಸೂರು:- ತಾಲೂಕು ಹಾರೋಹಳ್ಳಿಯಲ್ಲಿ ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಪ್ರತಾಪ್ ಸಿಂಹಗೆ ಘೇರಾವ್ ಹಾಕಿದ ಘಟನೆ ಜರುಗಿದೆ.
ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ಮೂರ್ತಿಯ ಕೃಷ್ಣ ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಈ ಹಿಂದೆ ತಿಳಿಸಿದ್ದರು. ಹೀಗಾಗಿ ಇಂದು ಭೂಮಿಪೂಜೆ ಮತ್ತು ರಾಮನ ಪೂಜೆ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು. ಈ ವೇಳೆ ಕೆಲ ಸ್ಥಳೀಯರು ಸಂಸದರನ್ನು ಘೇರಾವ್ ಹಾಕಿ ಮಹಿಷಾ ದಸರಕ್ಕೆ ವಿರೋಧ ನೆಪ ಹೇಳಿಕೊಂಡು ಅಪಮಾನ ಮಾಡಿ ದಲಿತ ವಿರೋಧಿ ಎಂದು ಕರೆದು ಕಾರ್ಯಕ್ರಮಕ್ಕೆ ಬರದಂತೆ ಅಡ್ಡಿಪಡಿಸಿದ್ದಾರೆ.
ಇದರಿಂದ ಬೇಸರಕೊಂಡ ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮದಲ್ಲಿ ಭಾಗಿಯಾಗದೆ ಹೊರ ನಡೆದರು. ಜಾತ್ಯಾತೀತವಾಗಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಜಾತಿ ತಂದು ಗಲಾಟೆ ಮಾಡಲಾಗಿದೆ.